Indian Coast Guard Recruitment: 10Th, PUC ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ನಮ್ಮ ಭಾರತೀಯ ಕರಾವಳಿ ಕಾವಲು ಪಡೆಯಲಿ ಖಾಲಿ ಇರುವಂತ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 21,700 ಸಿಗುತ್ತೆ.! ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಅರ್ಜಿ ಆಹ್ವಾನ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ನೌಕಾಪಡೆ ಹೊಸ ನೇಮಕಾತಿ (Indian Coast Guard Recruitment).?
ಹೌದು ಸ್ನೇಹಿತರೆ ನಮ್ಮ ಭಾರತೀಯ ನೌಕಾಪಡೆಯಲ್ಲಿ ಅಥವಾ ಭಾರತೀಯ ಕರಾವಳಿ ಕಾವಲು ಪಡೆಯಲಿ ಖಾಲಿ ಇರುವಂತ 300ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 21,700 ಸಂಬಳ ನೀಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬ ನಿರುದ್ಯೋಗಿ ಅಭ್ಯರ್ಥಿಗಳು ಈ ಉದ್ಯೋಗಗಳ ಲಾಭ ಪಡೆದುಕೊಳ್ಳಿ

ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಭಾರತೀಯ ಕಾವಲು ಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ವಯೋಮಿತಿ ಎಷ್ಟು ಹೊಂದಿರಬೇಕು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಇತರ ಹಲವಾರು ವಿವರಗಳಿಗೆ ಸಂಬಂಧಿಸಿದಂತೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನಿಯನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಪ್ರತಿದಿನ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗಳ ನೇಮಕಾತಿ ವಿವರ (Indian Coast Guard Recruitment).?
ನೇಮಕಾತಿ ಇಲಾಖೆ:- ಭಾರತೀಯ ನೌಕಾಪಡೆ
ಹುದ್ದೆಗಳ ಸಂಖ್ಯೆ:- 300 ಖಾಲಿ ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಹುದ್ದೆಗಳ ವಿವರ:-
1) (general duty) ನಾವಿಕ್ 260 ಹುದ್ದೆಗಳು
2) (domestic branch) ನಾವಿಕ್ 40 ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 11/02/2025
ಅರ್ಜಿ ಕೊನೆಯ ದಿನಾಂಕ:- 25/02/2025
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Indian Coast Guard Recruitment).?
ವಯೋಮಿತಿ:- ಸ್ನೇಹಿತರೆ ಈ 300 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ಕರಾವಳಿ ಕಾವಲು ಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ 22 ವರ್ಷಗಳು ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ
1) SC & ST ಅಭ್ಯರ್ಥಿಗಳಿಗೆ:- 05 ವರ್ಷ
2) OBC & ಹಿಂದುಳಿದ ಅಭ್ಯರ್ಥಿಗಳಿಗೆ:- 03 ವರ್ಷ
ವಿದ್ಯಾರ್ಹತೆ:- ಸ್ನೇಹಿತರೆ ಕರಾವಳಿ ಕಾವಲು ಪಡೆಯಲಿ ಖಾಲಿ ಇರುವ 300 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಒಂದು ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಜನರಲ್ ಡ್ಯೂಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗಣಿತ ಮತ್ತು ಭೌತಶಾಸ್ತ್ರ ವಿಷಯದಲ್ಲಿ ದ್ವಿತೀಯ ಪಿಯುಸಿ ಮುಗಿಸಿರಬೇಕು ಹಾಗೂ ಡೊಮೆಸ್ಟಿಕ್ ಬ್ರಾಂಚ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು ಹೆಚ್ಚಿನ ವಿವರಕ್ಕಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ಅರ್ಜಿ ಶುಲ್ಕ ಎಷ್ಟು:– ಕರಾವಳಿ ಕಾವಲು ಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಾಮಾನ್ಯ ಹಾಗೂ ಹಿಂದುಳಿದ ಮತ್ತು ಇತರ ಯಾವುದೇ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೂ 300 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೂನ್ಯ ಅರ್ಜಿ ಶುಲ್ಕ ಅಥವಾ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಸಂಬಳ ಎಷ್ಟು:- ಸ್ನೇಹಿತರ ಕರಾವಳಿ ಕಾವಲು ಪಡೆ ಅಥವಾ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ 21700 ಇಂದ ಗರಿಷ್ಠ 35000 ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ನೀವು ಇದಕ್ಕೆ ಸಂಬಂಧಿಸಿದ ಹೆಚ್ಚಿನ ವಿವರ ಪಡೆಯಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಭಾರತೀಯ ಕರಾವಳಿ ಕಾವಲು ಪಡೆಯಲು ಖಾಲಿ ಇರುವ 300 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕ್ ಅಥವಾ ವೆಬ್ಸೈಟ್ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅಥವಾ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
www.joinindiancoastguard.gov.in
ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಮಾಹಿತಿಗಳನ್ನು ಪಡೆಯಲು ಬಯಸುತ್ತಿದ್ದೀರಾ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಅನೇಕ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು